Breaking News

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಮೃತ್ಯು

ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಕೂತನೂರು ಗ್ರಾಮದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಪಟ್ಟಣದ ಕೇರಳ ರಸ್ತೆಯ ಟೀಚರ್ಸ್ ಬಡಾವಣೆ ಬಳಿ ನಡೆದಿದೆ.ಶಿವಣ್ಣ(50) ಮೃತ ಬೈಕ್ ಸವಾರ.ಈತ ಗುಂಡ್ಲುಪೇಟೆ ಕಡೆಯಿಂದ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಶಿವಣ್ಣ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಗುಂಡ್ಲುಪೇಟೆ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ವೈದ್ಯರ ಸೂಚನೆ ಮೇರೆಗೆ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸರು ಎರಡು ಬೈಕ್ ಗಳನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *