Breaking News

ಶಿಗ್ಗಾವಿ ಬಳಿ ಲಾರಿ ಪಲ್ಟಿ: 20 ಆಡು ಸಾವು

ಆಡುಗಳನ್ನ ಸಾಗಿಸುತ್ತಿದ್ದ ಲಾರಿಯೊಂದು ಟೈಯ‌ರ್ ಸ್ಫೋಟಗೊಂಡ ಪರಿಣಾಮ ಲಾರಿ ಪಲ್ಟಿಯಾಗಿ 180 ಆಡುಗಳಲ್ಲಿ 20 ಆಡುಗಳು ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ.ಗುಜರಾತನಿಂದ ಮಂಡ್ಯ ಕಡೆಗೆ ಆಡುಗಳನ್ನು ತುಂಬಿಕೊಂಡು ಹೋಗುತ್ತಿದ್ದು ಲಾರಿ, ಟೈಯರ್ ಸ್ಫೋಟಗೊಂಡು ಹೆದ್ದಾರಿ ತಡೆ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ.ಗಾಯಗೊಂಡ ಆಡುಗಳಿಗೆ ಸ್ಥಳೀಯ ಪಶು ವೈದ್ಯಾಧಿಕಾರಿ ರಾಜೇಂದ್ರ ಅವರ ತಂಡದಿಂದ ಚಿಕಿತ್ಸೆ ನೀಡಲಾಗಿದೆ. ಘಟನೆ ಕುರಿತು ಶಿಗ್ಗಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *