Breaking News

ಜಮಖಂಡಿ; ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ: ನಾಲ್ವರು ಯುವಕರ ಸಾವು

ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ಕಬ್ಬಿನ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.ಸಿದ್ದಾಪುರ ಗ್ರಾಮದ ವಿಶ್ವನಾಥ ಕುಂಬಾರ(17), ಪ್ರವೀಣ ಶೇಡಬಾಳ(22), ಗಣೇಶ ಅಳ್ಳಿಮಟ್ಟಿ( 20), ಪ್ರಜ್ವಲ್ ಶೇಡಬಾಳ(17) ಮೃತರು.ಸಿದ್ದಾಪುರ ಗ್ರಾಮದಿಂದ ಸ್ನೇಹಿತರು ಸೇರಿಕೊಂಡು ತಡರಾತ್ರಿ ಶಿರೋಳ ಕಾಡಸಿದ್ಧೇಶ್ವರ ದೇವರ ಜಾತ್ರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಕಬ್ಬು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‌ಗೆ ಕಾರು ರಭಸವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಜಮಖಂಡಿ ಗ್ರಾಮೀಣ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *