Breaking News

ಹಿಟ್ಟಿನ ಗಿರಣಿಗೆ ಹೋದ 13 ವರ್ಷದ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ!

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ನಿವಾಸಿ ಅಪ್ರಾಪ್ತ ಬಾಲಕಿ, ನವೆಂಬರ್ 23 ರಂದು ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿರುವ ಹಿಟ್ಟಿನ ಗಿರಣಿಗೆ ಹೋಗುತ್ತಿದ್ದಳು. ಇದೇ ಸಮಯದಲ್ಲಿ ಬಾಲಕಿಯನ್ನು ಹಿಂಬಾಲಿಸಿದ ಇಬ್ಬರು ಆರೋಪಿಗಳಾದ ಮಣಿಕಂಠ ದಿನ್ನಿಮನಿ (28) ಮತ್ತು ಈರಣ್ಣ ಸಂಕಮ್ಮನವರ ಎಂಬುವವರು ಆಕೆಯ ಮೇಲೆ ದಾಳಿ ನಡೆಸಿದ್ದಾರೆ. ಯಾರೂ ಇಲ್ಲದ ಏಕಾಂತದ ಪ್ರದೇಶವನ್ನು ಗಮನಿಸಿ, ಬಾಲಕಿಯನ್ನು ಬಲವಂತವಾಗಿ ರಸ್ತೆಯ ಪಕ್ಕದಲ್ಲಿದ್ದ ಕಬ್ಬಿನ ಗದ್ದೆಗೆ ಎಳೆದೊಯ್ದು ಈ ಇಬ್ಬರು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಕೃತ್ಯದ ಬಳಿಕ ಬಾಲಕಿಯನ್ನು ಅಲ್ಲಿಯೇ ಬಿಟ್ಟು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *