Breaking News

ನಡತೆಯ ಮೇಲಿನ ಅನುಮಾನದಿಂದ ಲಿವ್-ಇನ್ ಸಂಗಾತಿಯ ಕೊಲೆ, ಪ್ರಿಯಕರ ಆತ್ಮಹತ್ಯೆಗೆ ಶರಣು!

ಬೆಂಗಳೂರಿನ ಇಂದಿರಾ ಪ್ರಿಯದರ್ಶಿನಿ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಆಕೆಯ ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿಯು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.ಕೊಲೆಯಾದ ಮಹಿಳೆಯನ್ನು ಲಲಿತಾ (49) ಎಂದು ಗುರುತಿಸಲಾಗಿದೆ. ಆಕೆಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಲಕ್ಷ್ಮಿನಾರಾಯಣ (51) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ತಕ್ಷಣವೇ ರಾಜಗೋಪಾಲನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *