ಅಬ್ಧುಲ್ ಅತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಸಹೋದರನಿಗೆ ಯುವತಿಯ ತಂದೆ ಕರೆ ಮಾಡಿ ತಿಳಿಸಿದ್ದಾರೆ. ಜೊತೆಗೆ ಗಜಾನನ ನಗರ ಬಳಿಯಲ್ಲಿ ಬರಲು ತಿಳಿಸಿದ್ದಾರೆ. ಅಂತೆಯೇ ಅಬ್ದುಲ್ ಸಹೋದರ ಸ್ಥಳಕ್ಕೆ ಬರುತ್ತಿದ್ದಂತೆಯೇ ಮೃತದೇಹವನ್ನು ಆಟೋದಲ್ಲಿ ಇಟ್ಟು ಯುವತಿ ಕುಟುಂಬಸ್ಥರು ಎಸ್ಕೇಪ್ ಆಗಿದ್ದಾರೆ.ಇತ್ತ ಈ ಕುರಿತು ಅಬ್ಧುಲ್ ಹುಸೇನ್ ಕುಟುಂಬಸ್ಥರು ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಯುವತಿಯ ಕುಟುಂಬಸ್ಥರ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಸಾವಿನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

