Breaking News

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರಿನಲ್ಲಿ ತಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರ ಯೋಗಕ್ಷೇಮ ವಿಚಾರಿಸಲು ತೆರಳಿದ್ದ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಭಾನುವಾರ ತಡರಾತ್ರಿ ಮನೆಗೆ ನುಗ್ಗಿ ಕಳ್ಳರು ಸುಮಾರು 60 ಗ್ರಾಂ ಚಿನ್ನಾಭರಣ 1 ಲಕ್ಷ ರೂ ಹಣದೊಂದಿಗೆ ಪರಾರಿಯಾಗಿದ್ದಾರೆ. ಸೋಮವಾರ ಬೆಳಿಗ್ಗೆ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಮದ್ದೂರು ಠಾಣೆಯ ಪೋಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ಯಶವಂತ್ ಕುಮಾರ್, ಮದ್ದೂರು ಪೋಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ನವೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *