Breaking News

ಕಂದಕಕ್ಕೆ ಉರುಳಿದ ಸರ್ಕಾರಿ ಬಸ್: ಐವರು ಗಂಭೀರ, ಹಲವರಿಗೆ ಸಣ್ಣಪುಟ್ಟ ಗಾಯ

ಗದಗ:- ಜಿಲ್ಲೆಯ ಶಿರಹಟ್ಟಿ ತಾಲೂಕು ಮಜ್ಜುರ ಬಳಿ ಇಂದು ಬೆಳಿಗ್ಗೆ ನಡೆದ ಅಪಘಾತ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಗದಗದಿಂದ ಶಿರಹಟ್ಟಿ ಮೂಲಕ ಕೇರಳ್ಳಿ ತಾಂಡಾಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ.ಈ ದುರಂತದಲ್ಲಿ 5 ಜನ ಗಂಭೀರವಾಗಿ ಗಾಯಗೊಂಡಿದ್ದು, 15 ಮಂದಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯರ ಪ್ರಕಾರ ಚಾಲಕನ ಅಜಾಗರೂಕ ಚಾಲನೆ ಕಾರಣವಾಗಿರಬಹುದೆಂಬ ಆರೋಪಗಳು ಕೇಳಿ ಬರುತ್ತಿವೆ. ಘಟನೆ ಸಂಭವಿಸಿದ ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಗದಗ JIMS ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಕ್ಷಣ ಮಾತ್ರ ಗಾಬರಿಯ ಸನ್ನಿವೇಶ ನಿರ್ಮಾಣವಾಗಿತ್ತು.

Share News

About BigTv News

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *