Breaking News

ಕಳಚಿ ಬಿದ್ದ ಟ್ರ್ಯಾಕ್ಟರ್ ಟ್ರೈಲರ್: ಇಬ್ಬರು ಸಾವು, 8 ಮಂದಿಗೆ ಗಾಯ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ -ಶಿಕಾರಿಪುರ ರಸ್ತೆಯ ಹಳೆಜೋಗ -ಜಯನಗರ ಗ್ರಾಮದ ಮಧ್ಯೆ ಟ್ರ್ಯಾಕ್ಟರ್ ಟ್ರೈಲರ್ ಕಳಚಿ ಇಬ್ಬರು ಸಾವನ್ನಪ್ಪಿದ್ದು, ಎಂಟು ಜನ ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ಟ್ರೈಲರ್ ಕಳಚಿ ಬಿದ್ದು ಅಪಘಾತ ಸಂಭವಿಸಿದೆ.ಶಿಕಾರಿಪುರ ತಾಲೂಕು ಅತ್ತಿಬೈಲು ಗ್ರಾಮದ ಕೂಲಿ ಕಾರ್ಮಿಕರಾದ ಗುತ್ಯಪ್ಪ(50), ದುರ್ಗಮ್ಮ(53) ಮೃತಪಟ್ಟವರು. ಅಪಘಾತದಲ್ಲಿ ಲೋಕಮ್ಮ, ಜಯಮ್ಮ, ಮಂಜಮ್ಮ, ನೀಲಪ್ಪ, ಕರಿಯಮ್ಮ, ಕಲ್ಪನಾ, ಕರಿಬಸಪ್ಪ, ದುರ್ಗಮ್ಮ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನ್ಯಾಮತಿ ತಾಲೂಕು ಸೂರಗೊಂಡನಕೊಪ್ಪ ಗ್ರಾಮದಲ್ಲಿ ಮೆಕ್ಕೆಜೋಳ ತೆನೆ ಮುರಿಯಲು ಅತ್ತಿಬೈಲಿನಿಂದ ಟ್ರ್ಯಾಕ್ಟರ್ ನಲ್ಲಿ ಹೋಗುವಾಗ ಚಾಲಕನ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *