Breaking News

ಪ್ರವಾಸದ ವೇಳೆ ಬಸ್ ಪಲ್ಟಿ ಪ್ರಕರಣ: ಮೈಸೂರಿಗೆ ಆಗಮಿಸಿದ ಪ್ರವಾಸಕ್ಕೆ ತೆರಳಿದ್ದ ಮಕ್ಕಳು

ಮೈಸೂರು: ಶಾಲಾ ಮಕ್ಕಳ ಪ್ರವಾಸದ ವೇಳೆ ಬಸ್ ಪಲ್ಟಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ 3 ಗಂಟೆಗೆ ಮಕ್ಕಳೆಲ್ಲಾ ಮೈಸೂರಿಗೆ ಆಗಮಿಸಿದ್ದಾರೆ‌.ಎರಡು ದಿನದ ಹಿಂದೆ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮೃತ ಬಾಲಕನ ಮೃತ ದೇಹವನ್ನು ನಿನ್ನೆಯೇ ತಂದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ‌.ಪ್ರವಾಸಕ್ಕೆ ತೆರಳಿದ್ದ ಎಲ್ಲಾ ಮಕ್ಕಳು ಬಂದಿದ್ದಾರೆ. ಈ ಪೈಕಿ ನಾಲ್ಕು ಮಕ್ಕಳಿಗೆ ಸಣ್ಣ ಪುಟ್ಟ ಗಾಯವಾಗಿರುವ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ಎಲ್ಲಾ ಪೋಷಕರು ನಿರಾಳರಾಗಿದ್ದಾರೆ.
ಪ್ರವಾಸಕ್ಕೆ ತೆರಳಿದ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸುವುದಾಗಿ ಶಾಲಾ ಆಡಳಿತ ಮಂಡಳಿ ತಿಳಿಸಿದೆ.

Share News

About BigTv News

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *