ಮೈಸೂರು ಪೊಲೀಸ್ ಇಲಾಖೆಯ ಭರ್ಜರಿ ಕಾರ್ಯಾಚರಣೆಯಲ್ಲಿ ದೊಡ್ಡ ಪ್ರಮಾಣದ ವಸ್ತುಗಳು ವಶವಾಗಿವೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ ಪೊಲೀಸರು 2 ಕೆಜಿ ಗಾಂಜಾ, ₹7.30 ಲಕ್ಷ ನಗದು, 10 ತಲ್ವಾರ್‌ಗಳು ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.ಈ ಪ್ರಕರಣದ ಸಂಬಂಧ ಫೀರ್ಧೋಶ್ ಮತ್ತು ರೋಷನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇಬ್ಬರೂ ಮಾಲು ಸಮೇತ ಸಿಕ್ಕಿಬಿದ್ದಿರುವುದು ಪೊಲೀಸರು ತಿಳಿಸಿದರು. ಬಂಧಿತರಿಗೆ ವಿರುದ್ಧವಾಗಿ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಈ ಕ್ರಮಕ್ಕೆ ಸ್ಥಳೀಯವಾಗಿ ಪ್ರಶಂಸೆ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

