ಪುತ್ತೂರು: 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬದ್ರುದ್ದೀನ್ ಡಿ.ಕೆ. (27) ಅವರ ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆಬದ್ರುದ್ದೀನ್ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಅವರ ಮಾಲಕತ್ವದ ಝಿಂದಗೀ ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು.ನ. 29 ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ತೆರಳಿದವರು ಕಾಣೆಯಾಗಿರುವುದಾಗಿ ದೂರು ನೀಡಲಾಗಿತ್ತು. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

