Breaking News

ಆಟೋದಲ್ಲಿ ಇಬ್ಬರು ಯುವಕರ ಶವ ಪತ್ತೆ: ದುಶ್ಚಟದಿಂದ ಪ್ರಾಣಕ್ಕೆ ಕುತ್ತು ತಂದುಕೊಂಡ್ರಾ?

ಹೈದರಾಬಾದ್‌ನ ಚಂದ್ರಾಯನಗುಟ್ಟದಲ್ಲಿ ಆಟೋವೊಂದರಲ್ಲಿ ಇಬ್ಬರು ಯುವಕರ ಶವಗಳು ಪತ್ತೆಯಾಗಿದ್ದು, ಇದೀಗ ಭಾರೀ ಅನುಮಾನಕ್ಕೆ ಕಾರಣವಾಗಿದೆ. ಚಂದ್ರಾಯನಗುಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ರೋಮನ್ ಹೋಟೆಲ್ ಎದುರಿನಲ್ಲಿ ನಿಲ್ಲಿಸಲಾಗಿದ್ದ ಆಟೋದಲ್ಲಿ ಮೃತ ದೇಹ ಪತ್ತೆಯಾಗಿದೆ.ಮೃತರನ್ನು ಜಹಾಂಗೀರ್ ಮತ್ತು ಇರ್ಫಾನ್ ಎಂದು ಗುರುತಿಸಲಾಗಿದೆ. ಒಟ್ಟು ಮೂರು ಜನ ಈ ಸ್ಥಳದಲ್ಲಿ ಇದ್ದರು ಎಂದು ಹೇಳಲಾಗಿತ್ತು. ಇದರಲ್ಲಿ ಒಬ್ಬ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಮೂರು ಸಿರಿಂಜ್‌ಗಳು ಪತ್ತೆಯಾಗಿವೆ. ಮಾದಕ ದ್ರವ್ಯದ ಮಿತಿಮೀರಿದ ಸೇವನೆಯೇ ಇದಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಇದೀಗ ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *