ನಗರದ ಮೈದಾನವೊಂದರ ಬಳಿ ಮಾದಕ ಪದಾರ್ಥ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮಹಮ್ಮದ್ ಫಾಯಿಕ್ ಎಂಬಾತನನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ನಗರದ ಗ್ರೀನ್ ಪಾರ್ಕ್ ಮೈದಾನದ ಬಳಿ ವ್ಯಕ್ತಿಯೊಬ್ಬನು ಎಂಡಿಎಂಎ ಮಾರಾಟ ಮಾಡಲು ಬರುತ್ತಿರುವುದಾಗಿ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದರು.ಆರೋಪಿಯಿಂದ ಸುಮಾರು 45,000 ರೂ. ಮೌಲ್ಯದ ಎಂಡಿಎಂಎ, ಸಿಗರೇಟ್ ಪ್ಯಾಕೇಟ್, ಮೊಬೈಲ್ ಫೋನನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಫಾಯಿಕ್‌ಗೆ ಮಹಮ್ಮದ್ ಜುನೈದ್ ಎಂಬಾತ ಎಂಡಿಎಂಎ ಮಾರಾಟ ಮಾಡಿರುವುದು ತನಿಖೆಯ ವೇಳೆ ಗೊತ್ತಾಗಿದ್ದು ಆತನ ವಿರುದ್ಧವೂ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

