Breaking News

ಹಾರೋಹಳ್ಳಿ: ಪತ್ನಿಗೆ ಮಾನಸಿಕ ಕಿರುಕುಳ- ವ್ಯಕ್ತಿಗೆ ಶಿಕ್ಷೆ

ಪತ್ನಿಗೆ ಮಾನಸಿಕ ಕಿರುಕುಳ, ದೈಹಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿಯೊಬ್ಬರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಂಟನೇ ಸೆಷನ್ಸ್‌ ನ್ಯಾಯಾಲಯ 2 ವರ್ಷ 6 ತಿಂಗಳು ಶಿಕ್ಷೆ ಮತ್ತು ₹20 ಸಾವಿರ ದಂಡ ವಿಧಿಸಿ ಆದೇಶಿಸಿದೆ.ಪತಿ ಕುಮಾರ್ (27) ಎಂಬುವರ ಪತ್ನಿ 2013ರಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.ನಂತರ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆತ್ಮಹತ್ಯಗೆ ಯತ್ನಿಸಿದ ಮಹಿಳೆ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ನಂತರ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಕಗ್ಗಲೀಪುರ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾಗಿ ಚಂದ್ರಕಲಾ ವಾದ ಮಂಡಿಸಿದರು. ತನಿಖಾಧಿಕಾರಿ ಪಿಎಸ್‌ಐ ವಿಶ್ವನಾಥ್, ಸಿಬ್ಬಂದಿ ಸಂದೀಪ್ ಕಾರ್ಯಾಚರಣೆ ನಡೆಸಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *