ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಪಕ್ಕದ ಬಾವಿಗೆ ಉರುಳಿದ ಘಟನೆ ತಾಲೂಕಿನ ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆದಿದೆ. ಕುಂದಾಪುರದ ತೆಕ್ಕಟ್ಟೆಯಿಂದ ಅಕ್ಕಿಯನ್ನು ತುಂಬಿಕೊಂಡು ಶಿಗ್ಗಾವಿಗೆ ತೆರಳುತ್ತಿದ್ದ ಲಾರಿಯು ವೆಂಕಟಾಪುರದ ಬಳಿಯಲ್ಲಿ ಬರುತ್ತಿರುವಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಹೋಗಿದೆ.ಅಲ್ಲಿಯೇ ಇದ್ದ ಬಾವಿಯ ಕಟ್ಟೆಗೆ ಡಿಕ್ಕಿಯಾಗಿ ಮುಂದೆ ಹೋಗಿದ್ದು ಕಟ್ಟೆಗೆ ತಾಗಿಕೊಂಡು ನಿಂತಿದ್ದರಿಂದ ಲಾರಿ ತಲೆಕೆಳಗಾಗಿ ಬಾವಿಯೊಳಕ್ಕೆ ಹೋಗುವುದು ತಪ್ಪಿದ್ದು ಭಾರೀ ಅನಾಹುತ ತಪ್ಪಿದಂತಾಗಿದೆ. ಲಾರಿ ಚಾಲಕ ಧಾರವಾಡ ಮೂಲದ ಸಿದ್ದರಾಜು ಘೋರ್ಪಡೆ (34) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಹೋಗುತ್ತಿರುವವರು ನೆರವಿಗೆ ಧಾವಿಸಿ, ಕ್ಯಾಬಿನ್‌ನಲ್ಲಿ ಸಿಲುಕಿದ್ದ ಚಾಲಕನನ್ನು ಹೊರತೆಗೆದು ಭಟ್ಕಳದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

