ಬೆಂಗಳೂರಿನ ಕೆಆರ್ ಪುರಂ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ, ಕಳವಾಗಿದ್ದ ಬರೋಬ್ಬರಿ 70 ಲಕ್ಷ ರೂಪಾಯಿ ಮೌಲ್ಯದ 500 ಗ್ರಾಂ ಚಿನ್ನಾಭರಣ ಹಾಗೂ 1.5 ಕೆ.ಜಿ. ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಒಟ್ಟು 17 ಮನೆಗಳ ಕಳ್ಳತನ ಮಾಡಿದ್ದ ಆರೋಪಿ ಮೊಹಮ್ಮದ್ ಇಸ್ರಾರ್ ಎಂಬಾತನನ್ನು ಮಾಲು ಸಮೇತ ಬಂಧಿಸಲಾಗಿದೆ.ಕಳೆದ ಮೂರು ವರ್ಷಗಳಿಂದ ಈ ಕಳ್ಳ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ. ಆದರೆ, ಕೆ.ಆರ್. ಪುರಂ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಕೊನೆಗೂ ಮೊಹಮ್ಮದ್ ಇಸ್ರಾರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

