ಸಂಡೂರು: ತಾಲ್ಲೂಕಿನ ಡಿ.ಅಂತಾಪುರ ಗ್ರಾಮದಿಂದ ತೋರಣಗಲ್ಲು ಗ್ರಾಮದ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಎರಡು ಆಟೊಗಳ ಮೇಲೆ ಆಹಾರ, ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಆಟೊ ಸಮೇತ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡ ಘಟನೆ ಈಚೆಗೆ ನಡೆದಿದೆ.ಎರಡು ಆಟೊಗಳಲ್ಲಿನ ₹41 ಸಾವಿರ ಮೌಲ್ಯದ ಒಟ್ಟು 18 ಕ್ವಿಂಟಲ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಂಡೂರು ತಾಲ್ಲೂಕಿನ ಆಹಾರ ನಿರೀಕ್ಷಕ ಪ್ರದೀಪ್ ಅವರು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಈಚೆಗೆ ಪ್ರಕರಣ ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

