Breaking News

ಶಿಕ್ಷಣ ಇಲಾಖೆ ಸಿಬ್ಬಂದಿಗೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿ: ನೋಂದಣಿ ಆಗದಿದ್ದರೆ ವೇತನ ಸ್ಥಗಿತ, ಶಿಸ್ತುಕ್ರಮದ ಎಚ್ಚರಿಕೆ

ಶಿಕ್ಷಣ ಇಲಾಖೆ ವ್ಯಾಪ್ತಿಯ ಕಚೇರಿಗಳು, ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಅಧೀನ ಕಚೇರಿಗಳಲ್ಲಿಯೂ ಈ ವ್ಯವಸ್ಥೆ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಹೊಸ ಹಾಜರಾತಿ ವ್ಯವಸ್ಥೆ ಅನುಷ್ಠಾನ ಮಾಡಿದ ಬಗ್ಗೆ ವರದಿ ಸಲ್ಲಿಸುವಂತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.ಆಯುಕ್ತರ ಕಛೇರಿಯ ಅಧಿಕಾರಿ/ಸಿಬ್ಬಂದಿಗಳ ದೈನಂದಿನ ಹಾಜರಾತಿ ಮತ್ತು ಸಮಯಪಾಲನೆ ಕುರಿತಂತೆ ಈವರೆವಿಗೂ ಬಯೋಮೆಟ್ರಿಕ್ ಹಾರ್ಡ್‌ ವೇರ್ ವ್ಯವಸ್ಥೆಯ ಮುಖಾಂತರದಲ್ಲಿ ನಿರ್ವಹಣೆ ಮಾಡಲಾಗುತ್ತಿತ್ತು. ಇದೀಗ ಕರ್ನಾಟಕ ಸರ್ಕಾರದ ವತಿಯಿಂದ ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆಯು (KAMS) ಅಭಿವೃದ್ಧಿಗೊಂಡಿದೆ. ಪ್ರಸ್ತುತದಲ್ಲಿ ಇರುವ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಯಂತ್ರೋಪಕರಣದ ಕಾಲಿಕ ನಿರ್ವಹಣೆ ಮತ್ತು ವರದಿಗಳ ಭೌತಿಕ ನಿರ್ವಹಣೆ ಆಗಬೇಕಾಗಿದೆ. ಆದರೆ KAMS ವ್ಯವಸ್ಥೆಯಲ್ಲಿ ಯಾಂತ್ರಿಕವಾಗಿ ಸಂಪೂರ್ಣವಾಗಿ ಹಾಜರಾತಿ ವ್ಯವಸ್ಥೆಯು ನಿರ್ವಹಣೆಯಾಗುವುದರಿಂದ ಇದು ಅತ್ಯಂತ ಪರಿಣಾಮಕಾರಿ ವ್ಯವಸ್ಥೆಯಾಗಲಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *