Breaking News

ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’: ರಿಷಬ್‌ ಶೆಟ್ಟಿಗೆ ಪಂಜುರ್ಲಿ ದೈವ ಅಭಯ

ಕಾಂತಾರ: ಚಾಪ್ಟರ್ 1′ ಚಿತ್ರದ ಯಶಸ್ಸಿನ ನಂತರ ಅವರು ತಮ್ಮ ಪತ್ನಿ, ಮಕ್ಕಳು ಹಾಗೂ ಕಾಂತಾರ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಜೊತೆಗೆ ವಾರಾಹಿ ಪಂಜುರ್ಲಿ ದೈವಕ್ಕೆ ಮಂಗಳೂರಿನಲ್ಲಿ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು.ದೈವವು ರಿಷಬ್ ಶೆಟ್ಟಿಯನ್ನು ಅಪ್ಪಿ ಆಲಂಗಿಸಿದೆ. ‘ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’ ಎಂದು ದೈವ ಅಭಯ ನೀಡಿದ್ದು, ರಿಷಬ್ ಖುಷಿಯಾಗಿದ್ದಾರೆ. ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿ ಪಂಜುರ್ಲಿ ಮಮಕಾರ ತೋರಿದೆ. ಮಂಗಳೂರಿನ ಬಾರೆಬೈಲ್ ವಾರಾಯಿ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನಡೆದಿದೆ.ದೈವದ ನೇಮೋತ್ಸವದಲ್ಲಿ ರಿಷಬ್ ಪತ್ನಿ ಪ್ರಗತಿ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಂಗದೂರು, ನಿರ್ದೇಶಕ ಸಂತೋಷ್ ಆನಂದ ರಾಮ್ ಸೇರಿದಂತೆ ಚಿತ್ರರಂಗದ ಹಲವು ಮಂದಿ ಭಾಗಿಯಾಗಿದ್ದರು. ದೈವದ ಪ್ರಸಾದ ಸ್ವೀಕರಿಸಿ ದೈವಾನುಗ್ರಹಕ್ಕೆ ಪಾತ್ರರಾದರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *