Breaking News

ಬಾಗಲಕೋಟೆ: ದಾಸೋಹ ಚಕ್ರವರ್ತಿ, ಬಂಡಿಗಣಿ ಮಠದ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ!

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಪ್ರಸಿದ್ಧ ಬಸವಗೋಪಾಲ ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ (75) ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ‘ದಾಸೋಹ ಚಕ್ರವರ್ತಿ ಅನ್ನದಾನೇಶ್ವರ’ ಎಂದೇ ಶ್ರೀಗಳು ಹೆಸರುವಾಸಿಯಾಗಿದ್ದರು.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿ, ಲಿವರ್ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಾಲ್ಕು ದಿನಗಳ ಹಿಂದೆ ಅವರನ್ನು ಬೆಳಗಾವಿಯ ಕೆಎಲ್‌ಇ (KLE) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ. ನಾಳೆ (ಶನಿವಾರ) ಸಂಜೆ 4 ಗಂಟೆಗೆ ವೀರಶೈವ ಲಿಂಗಾಯತ ವಿಧಿವಿಧಾನಗಳ ಪ್ರಕಾರ ಅಂತ್ಯಸಂಸ್ಕಾರ ನಡೆಯಲಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *