ಬೈಕ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಯಡ್ರಾಮಿಯ ರಾಸಣಗಿ ಕ್ರಾಸ್ ಬಳಿ ನಡೆದಿದೆ. ಭೂಮಿಕಾ ಹಂಗರಗಾ (20) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಅಮೋಘಸಿದ್ದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯುವಕ ಮತ್ತು ಯುವತಿ ಜೇವರ್ಗಿ ಪಟ್ಟಣದಿಂದ ತಮ್ಮ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಎನ್ಇಕೆಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

