ನಗರದ ಪುಣೆ- ಬೆಂಗಳೂರು ಮುಖ್ಯರಸ್ತೆಗೆ ಹೊಂದಿಕೊಂಡಿರುವ ವಾರ್ಡ್ ಸಂಖ್ಯೆ 70ರಲ್ಲಿ ಸಿ.ಸಿ ರಸ್ತೆ ನಿರ್ಮಾಣ ಸೇರಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ.ಬಂಕಾಪುರ ಚೌಕ್‌ನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಗಾರ್ಡನ್‌ಪೇಟೆಯಲ್ಲಿ ಸರ್ಕಾರಿ ಉರ್ದು ಶಾಲೆ ಇದೆ. ವಾರ್ಡ್‌ನಲ್ಲಿ ಕಿರಿದಾದ ಓಣಿಗಳಿವೆ. ರೈತರು, ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ವಾಳ್ವೇಕರ ಹಕ್ಕಲ ಕೊಳೆಗೇರಿ ಪ್ರದೇಶವಾಗಿದ್ದು, ಇಲ್ಲಿ ಸಾರ್ವಜನಿಕ ಶೌಚಾಲಯ ಸೇರಿ ಹಲವು ಸೌಲಭ್ಯ ಕಲ್ಪಿಸಬೇಕಿದೆ. ಬಹುತೇಕ ಬಡಾವಣೆಗಳಲ್ಲಿ 24X7 ಕುಡಿಯುವ ನೀರಿನ ಸೌಲಭ್ಯವಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

