Breaking News

ಠಾಣೆಗೆ ಬರುವಾಗಲೂ ಗಾಂಜಾ ಸೇವಿಸಿ ಬಂದ ವ್ಯಕ್ತಿ; ಪ್ರಕರಣ ದಾಖಲು

ಮಂಗಳೂರು: ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆಂದು ಪೊಲೀಸ್‌ ಠಾಣೆಗೆ ಬರುವಾಗಲೂ ಗಾಂಜಾ ಸೇವನೆ ಮಾಡಿ ಬಂದ ವ್ಯಕ್ತಿಯ ವಿರುದ್ಧ ಮತ್ತೂಂದು ಪ್ರಕರಣ ದಾಖಲಾಗಿದೆ.ಕಾವೂರು ಠಾಣೆಯಲ್ಲಿ 2024ರಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಅದ್ಯಪಾಡಿ ನಿವಾಸಿ ಮಹೇಂದ್ರ ಪೈ (35) ಎಂಬಾತನನ್ನು ಡಿ.3ರಂದು ಠಾಣೆಗೆ ಕರೆಸಿಕೊಳ್ಳಲಾಗಿತ್ತು. ಈ ವೇಳೆ ಆತ ಮಾದಕ ಪದಾರ್ಥ ಸೇವನೆ ಮಾಡಿದ್ದಾನೆಯೇ ಎಂದು ಪತ್ತೆಹಚ್ಚಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವಿಸಿರುವುದು ತಿಳಿದು ಬಂದಿದೆ. ಆತನ ವಿರುದ್ಧ ಕಾವೂರು ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಮತ್ತೂಂದು ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *