Breaking News

ಘಟಪ್ರಭಾ: ಅಪಘಾತ; ಬೈಕ್ ಸವಾರ ಸಾವು

ಘಟಪ್ರಭಾ (ಗೋಕಾಕ):ತಾಲ್ಲೂಕಿನ ಲೋಳಸೂರ ಗ್ರಾಮದ ಹತ್ತಿರ ಮಂಗಳವಾರ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ ಹಿಂದಿಕ್ಕುವ ಭರದಲ್ಲಿ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಟ್ರ್ಯಾಲಿ ಚಕ್ರದಡಿ ಉರುಳಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮೂಡಲಗಿಯ ಬಸು ಲಕ್ಷ್ಮಣ ಗೌಲೆತ್ತಿನವರ (24) ಅವರನ್ನು ಗೋಕಾಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾರೆ ಘಟನೆ ಬಳಿಕ ಟ್ರ್ಯಾಕ್ಟರ್‌ ಚಾಲಕ ಪರಾರಿಯಾಗಿದ್ದಾನೆ. ಘಟಪ್ರಭಾ ಪೊಲೀಸರು ಉಭಯ ಸವಾರರ ಮೇಲೆ ಅಜಾಗರೂಕತೆ ಚಾಲನೆಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *