Breaking News

ರೈಲ್ವೆ ಹಳಿ ಬಳಿ ನೇಣು ಬಿಗಿದ ಸ್ಥಳದಲ್ಲಿ ಯುವಕನ ಶವ ಪತ್ತೆ: ಆತ್ಮಹತ್ಯೆಯೋ. ಕೋಲೆಯೋ?

ಕೋಲಾರದ ರಹಮತ್ ನಗರ ರೈಲ್ವೆ ಬ್ರಿಡ್ಜ್ ಹಳಿಗಳ ಬಳಿ 26 ವರ್ಷದ ಯುವಕನು ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದ್ದು ಸಂಚಲನ ಮೂಡಿಸಿದೆ.ಉತ್ತರಪ್ರದೇಶ ಮೂಲದ ರಾಜೇಂದ್ರ ಎಂಬ ಯುವಕ, ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದನೆಂದು ತಿಳಿದು ಬಂದಿದೆ. ಈ ಘಟನೆ ಆತ್ಮಹತ್ಯೆಯೋ ಅಥವಾ ಕೊಲೆ ಮಾದರಿಯ ಸಂಶಯಾಸ್ಪದ ಸಾವೋ ಎಂಬ ಪ್ರಶ್ನೆ ಪೊಲೀಸರ ಮುಂದೆ ನಿಂತಿದೆ. ಮಾಹಿತಿ ಪಡೆದ ಬಂಗಾರಪೇಟೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *