Breaking News

ಅಣ್ಣಿಗೇರಿ ಬಳಿ ಭೀಕರ ರಸ್ತೆ ಅಪಘಾತ — ಇನ್ಸ್ಪೆಕ್ಟರ್ ಪಂಚಯ್ಯ ಸಾಲಿಮಠ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಇನ್ಸ್‌ಪೆಕ್ಟರ್ ಪಂಚಯ್ಯ ಸಾಲಿಮಠ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಪಂಚಯ್ಯ ಸಾಲಿಮಠ ಅವರು ಬೈಲಹೊಂಗಲ,

ಗದಗ ಹಾಗೂ ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೇವೆ ಸಲ್ಲಿಸಿದ್ದ, ಶಿಸ್ತಿನ ಮತ್ತು ಜನಸೇವೆಗೆ ಹೆಸರು ಪಡೆದ ಪೊಲೀಸ್ ಅಧಿಕಾರಿ. ಅಪಘಾತದ ಮಾಹಿತಿ ತಿಳಿದ ಕೂಡಲೇ ಅಣ್ಣಿಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಪೊಲೀಸ್ ಇಲಾಖೆಯಲ್ಲಿ ಹಾಗೂ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಬರಬೇಕಿದೆ.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *