Breaking News

ಕಲಬುರಗಿಯಲ್ಲಿ ಬೈಕ್‌-ಬಸ್‌ ಮಧ್ಯೆ ಭೀಕರ ಅಪಘಾತ | ಯುವತಿ ಸ್ಥಳದಲ್ಲೇ ಸಾವು

ಬೈಕ್‌ನಲ್ಲಿ ಹೋಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ 20 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ರಾಸಣಗಿ ಕ್ರಾಸ್ ಬಳಿ ನಡೆದಿದೆ. ಭೂಮಿಕಾ ಹಂಗರಗಾ ಮೃತ ಯುವತಿಯಾಗಿದ್ದು, ಬೈಕ್ ಸವಾರ ಅಮೋಘಸಿದ್ದ ಗಂಭೀರವಾಗಿ ಗಾಯಗೊಂಡಿದ್ದಾರೆ.ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂಬದಿಯಿಂದ ಅತಿ ವೇಗವಾಗಿ ಬಂದ NEKRTC (ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ) ಬಸ್, ಬೈಕ್‌ಗೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಯುವತಿ ಭೂಮಿಕಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಅಮೋಘಸಿದ್ದ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *