ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ವಿಮಾನ ರದ್ದು ರಾದ್ಧಾಂತ ಶನಿವಾರ(ಡಿ.6) ಕೂಡ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಾಲ್ಕು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ದೇಶಾದ್ಯಂತ ಪೈಲಟ್‌ಗಳ ವಾರದ ವಿಶ್ರಾಂತಿಗೆ ಸಂಬಂಧಿಸಿದಂತೆ ಹೊಸ ನಿಯಮದ ಅನುಷ್ಠಾನವನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ತಾತ್ಕಾಲಿಕವಾಗಿ ಹಿಂಪಡೆದಿರುವ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ.ಇದರಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 124 ವಿಮಾನಗಳು (ಹೊರಡಬೇಕಾಗಿದ್ದ 63 ಹಾಗೂ ಆಗಮಿಸಬೇಕಾಗಿದ್ದ 61 ವಿಮಾನಗಳು) ಮುಂಬೈ ವಿಮಾನ ನಿಲ್ದಾಣದಲ್ಲಿ 109, ದೆಹಲಿ ವಿಮಾನ ನಿಲ್ದಾಣದಿಂದ 106 ಹಾಗೂ ಹೈದರಾಬಾದ್ ವಿಮಾನ ನಿಲ್ದಾಣದಿಂದ 66 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

