ಪ್ರೀತಿ-ಪ್ರೇಮದ ವಿಚಾರವಾಗಿ ಆರಂಭವಾದ ಗಲಾಟೆ ಯುವಕನ ಹತ್ಯೆಯಲ್ಲಿ ಕೊನೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ಪವನ್ (28) ಕೊಲೆಯಾದ ಯುವಕ. ವೃತ್ತಿಯಲ್ಲಿ ಆಟೋ ಚಾಲಕ. ದೊಡ್ದಬಳ್ಳಾಪುರದ ಡಿ ಕ್ರಾಸ್ ಬಳಿಯ ಟಿಬಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಯುವಕನನ್ನು ಹತ್ಯೆ ಮಾಡಿದ್ದಾರೆ. ಯುವತಿಯ ವಿಚಾರವಾಗಿ ಈ ಹಿಂದೆ ನಡೆದಿದ್ದ ಗಲಾಟೆ ದ್ವೇಷಕ್ಕೆ ತಿರುಗಿದ್ದು ಇದೇ ಕಾರಣಕ್ಕೆ ಯುವಕನನ್ನು ಹತ್ಯೆ ಮಾಡಲಾಗಿದೆ ಎಂದು ಪವನ್ ಕುಟುಂಬದವರು ಆರೋಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

