Breaking News

ಉತ್ತರ ಗೋವಾದ ನೈಟ್​​ಕ್ಲಬ್​​ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು

ಉತ್ತರ ಗೋವಾದ ಅರ್‌ಪೋರಾದಲ್ಲಿರುವ ನೈಟ್​​ ಕ್ಲಬ್‌ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ 23 ಜನ ದುರ್ಮರಣ ಹೊಂದಿದ್ದಾರೆ. ಮಧ್ಯರಾತ್ರಿ ಅಡುಗೆ ಮನೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ನೈಟ್​​ ಕ್ಲಬ್ ಹೊತ್ತಿ ಉರಿದಿದೆ.ಘಟನೆಯಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದು, ಆ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಕೂಡ ಇರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನೈಟ್‌ಕ್ಲಬ್​​ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರೋದೇ ಹೆಚ್ಚಿನ ಅವಘಡಕ್ಕೆ ಕಾರಣವಾಗಿದೆ. ಗೋವಾ ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ. ದೂರದಲ್ಲಿರುವ ಅರ್‌ಪೋರಾ ಗ್ರಾಮದಲ್ಲಿ ಈ ಜನಪ್ರಿಯ ನೈಟ್​​ಕ್ಲಬ್​​​ ಕಳೆದ ವರ್ಷ ಆರಂಭವಾಗಿತ್ತು. ಎಲ್ಲ 23 ಶವಗಳನ್ನು ಘಟನಾ ಸ್ಥಳದಿಂದ ಹೊರತೆಗೆಯಲಾಗಿದ್ದು, ಬಾಂಬೊಲಿಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿದ್ದು, ಇಡೀ ರಾತ್ರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *