Breaking News

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ: ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

25 ಜನರ ಪ್ರಾಣಹಾನಿಗೆ ಕಾರಣವಾದ ಪಣಜಿ ನೈಟ್ ಕ್ಲಬ್ ಅಗ್ನಿ ದುರಂತದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ.ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ನೈಟ್ ಕ್ಲಬ್ ಮಾಲಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು, ಅವರಿಬ್ಬರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.ಬಿರ್ಚ್ ಬೈ ರೋಮಿಯೊ ಲೇನ್‌ನಲ್ಲಿರುವ ನೈಟ್ ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿತ್ತು. ಈ ನೈಟ್‌ ಕ್ಲಬ್‌ ರಾಜ್ಯ ರಾಜಧಾನಿ ಪಣಜಿಯಿಂದ ಸುಮಾರು 25 ಕಿಮೀ ದೂರವಿರುವ ಅಪೂರ್ವ ಗ್ರಾಮದಲ್ಲಿದೆ. ಕಳೆದ ವರ್ಷವಷ್ಟೇ ಈ ನೈಟ್ ಕ್ಲಬ್ ಪ್ರಾರಂಭಗೊಂಡಿತ್ತು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *