Breaking News

ಧಾರವಾಡ :ಆನ್‌ಲೈನ್ ಗೇಮ್‌ಗೆ ಮತ್ತೊಬ್ಬ ಯುವಕ ದುರ್ಮರಣ!!

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡೆದಿದೆ. ಈತ ಫೈನಾನ್ಸ್‌ಗೆ ಕಟ್ಟಬೇಕಿದ್ದ 53 ಸಾವಿರ ಹಣವನ್ನು ಆನ್‌ಲೈನ್ ಗೇಮ್‌ಗೆ ಬಳಸಿಕೊಂಡು ನಷ್ಟ ಅನುಭವಿಸಿದ್ದ. ಈ ಹಿಂದೆ ಕೂಡ ಈತ ಮಾಡಿದ್ದ ಸಾಲವನ್ನು ತಾಯಿ ಮಂಜವ್ವ ತೀರಿಸಿದ್ದರು. ಇದೀಗ ಮತ್ತೆ ಬಳಸಿದ ಫೈನಾನ್ಸ್ ಹಣವನ್ನು ಮಾಲೀಕರಿಗೆ ಕಟ್ಟಲಾಗದೆ ಮನನೊಂದು ಮಂಗಳಗಟ್ಟಿ ಗ್ರಾಮದ ಶೇಖನಗೌಡ ಪಾಟೀಲ ಅವರ ತೋಟದಲ್ಲಿ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗರಗ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *