ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬರುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಭಾವಿ ದಂಪತಿ ಮೃತಪಟ್ಟಿದ್ದಾರೆ.ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಿಕ್ಕಬಣಕಲ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ,ಆದರೆ ಬೈಕ್ ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.ಮೃತರನ್ನ ಕೊಪ್ಪಳ ತಾಲೂಕಿನ ಇರಕಲ್ಲಗಢ ಗ್ರಾಮದ ಕರಿಯಪ್ಪ ಮಡಿವಾಳ(26), ಕಾರಟಗಿ ತಾಲೂಕಿನ ಮುಸ್ಟೂರು ಗ್ರಾಮದ ಕವಿತಾ(19) ಎಂದು ಗುರುತಿಸಲಾಗಿದೆ. ಡಿಸೆಂಬರ್ 21ರಂದು ಇವರಿಬ್ಬರ ಮದುವೆ ನಿಶ್ಚಯವಾಗಿತ್ತು.ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆ ಸಂಬಂಧ ಲಾರಿ ಚಾಲಕನನನ್ನು ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

