Breaking News

ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!

ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯ ಗಣೇಶ್ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆಯು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಒಟ್ಟು ಆರು ಆರೋಪಿಗಳ ಪೈಕಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಗಣೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸಂಜಯ್, ನಾಗಭೂಷಣ್ ಮತ್ತು ಮಿಥುನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಕೃತ್ಯದ ನಂತರ ತಲೆಮರೆಸಿಕೊಂಡಿದ್ದರು. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವಿಕ್ರಂ ಅಮಟೆ ಅವರ ನೇತೃತ್ವದಲ್ಲಿ ಪ್ರಕರಣದ ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಆರೋಪಿಗಳಿಗಾಗಿ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದವು. ಈ ಕಾರ್ಯಾಚರಣೆಯ ಫಲವಾಗಿ ಕೊಲೆ ನಡೆದ ಕೆಲವೇ ದಿನಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *