Breaking News

ಬೈಂದೂರು | ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಡಿ.6ರಂದು ರಾತ್ರಿ ವೇಳೆ ಉಪ್ಪುಂದ ಕಂಬದಕೋಣೆ ಸೊಸೈಟಿಯ ಎದುರು ನಡೆದಿದೆ.ಮೃತರನ್ನು ನಾಗರಾಜ ಖಾರ್ವಿ ಎಂದು ಗುರುತಿಸಲಾಗಿದೆ. ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಗಣೇಶ್ ಟ್ರಾವೆಲ್ಸ್ ಬಸ್, ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.ಇದರಿಂದ ಬೈಕ್ ಸವಾರ ನಾಗರಾಜ ಖಾರ್ವಿ ಗಂಭೀರ ಗಾಯಗೊಂಡಿದ್ದು, ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *