ಪ್ರೀತಿಸಿದ ಯುವಕ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಯುವತಿಯೊಬ್ಬಳು ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರು ಘಟನೆ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ.ಕಳೆದ ಎರಡು ವರ್ಷಗಳಿಂದ ವರ್ಷಿಣಿ ಹಾಗೂ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಆತ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಈ ಘಟನಾ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

