ದೆಹಲಿಯ ನರೇಲಾ ಪ್ರದೇಶದಲ್ಲಿ ೪ ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ರಿಜ್ವಾನ್‌ನನ್ನು ಬಂಧಿಸಿದ್ದಾರೆ.ಪೀಡಿತ ಬಾಲಕಿ ತನ್ನ ಕುಟುಂಬದವರೊಂದಿಗೆ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಆಕೆಯ ಕುಟುಂಬದವರು ಅವಳನ್ನು ಉರ್ದು ಕಲಿಯುವುದಕ್ಕಾಗಿ ಹತ್ತಿರದ ಮದರಸಾಗೆ ಕಳುಹಿಸುತ್ತಿದ್ದರು. ಡಿಸೆಂಬರ್ ೩ ರಂದು, ಅವಳು ಮದರಸಾಗ ಹೋಗುತ್ತಿದ್ದಳು. ದಾರಿಯಲ್ಲಿ ಕುಡಿದ ಮತ್ತಿನಲ್ಲಿದ್ದ ರಿಜ್ವಾನ್ ಅವಳಿಗೆ ಆಮಿಷವೊಡ್ಡಿ ತನ್ನೊಂದಿಗೆ ಕರೆದುಕೊಂಡು ಹೋಗಿ, ಕಟ್ಟಡದ ಎರಡನೇ ಮಹಡಿಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಬಾಲಕಿಯ ಅಳುವಿನ ಶಬ್ದ ಕೇಳಿ ಜನರಿಗೆ ಈ ಘಟನೆ ತಿಳಿದು ಬಂದಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

