Breaking News

ಬೆಳಗಾವಿ | ಎಂಇಎಸ್ ವಿರುದ್ಧ ಪ್ರತಿಭಟನೆ: ಕರವೇ ಕಾರ್ಯಕರ್ತರು ವಶಕ್ಕೆ

ಎಂಇಎಸ್ ಧೋರಣೆ ಖಂಡಿಸಿ, ಇಲ್ಲಿನ ವ್ಯಾಕ್ಸಿನ್ ಡಿಪೊ ಮೈದಾನದತ್ತ ತೆರಳುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಧರ್ಮವೀರ ಸಂಭಾಜಿ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದರು.ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ.ಮತ್ತೊಂದೆಡೆ, ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ವಾಜೀದ್ ಹಿರೇಕೋಡಿ ಅವರನ್ನು ವಶಕ್ಕೆ ಪಡೆಯಲಾಗಿದೆ. ನಗರದಲ್ಲಿ ಏಕಕಾಲಕ್ಕೆ ಕನ್ನಡ ಸಂಘಟನೆಯವರು ಮತ್ತು ಎಂಇಎಸ್ ನವರು ಬೇರೆ ಬೇರೆ ಸ್ಥಳಗಳಲ್ಲಿ ಪ್ರತಿಭಟಿಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *