Breaking News

ಚಲಿಸುತ್ತಿದ್ದ ಕಾರು ನಡುರಸ್ತೆಯಲ್ಲಿಯೇ ಧಗಧಗ, 8 ಮಂದಿ ಪ್ರಯಾಣಿಕರು ಜಸ್ಟ್ ಮಿಸ್

ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.ರಾತ್ರಿ 12 ಗಂಟೆ ಸುಮಾರಿಗೆ ಚಂದಾಪುರದ ಬಳಿ ಯೂಟರ್ನ್ ತೆಗೆದುಕೊಳ್ಳುವಾಗ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಎಂಟು ಮಂದಿ ಪ್ರಯಾಣಿಕರು ಸಮಯಪ್ರಜ್ಞೆಯಿಂದ ತಕ್ಷಣವೇ ಕೆಳಗಿಳಿದು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *