Breaking News

ಕೊಡಿಹಬ್ಬಕ್ಕೆ ಹೋದ ಮಹಿಳೆ ನಾಪತ್ತೆ

ಕುಂದಾಪುರ: ಇಲ್ಲಿನ ಹೊದ್ರೋಳಿಯ ದಿಣ ಸಂಜೀವ ಪೂಜಾರಿ ಅವರ ಪುತ್ರಿ ರೇಷ್ಮಾ (25) ಅವರು ಕೋಟೇಶ್ವರ ಕೊಡಿ ಹಬ್ಬಕ್ಕೆಂದು ಹೋದವರು ಕಾಣೆಯಾಗಿದ್ದಾರೆ.ಅವರು ಪತಿ ಮನೆ ತರಿಕೆರೆ ತಾಲೂಕಿನ ಎರಂಗಾಪುರ ಗ್ರಾಮದಿಂದ ಪತಿಯ ಜತೆ ಆಗಮಿಸಿದ್ದರು. ಡಿ. 6ರಂದು ಜಾತ್ರೆಗೆ ಹೋದವರು ಕುಂದಾಪುರ ಶಾಸ್ತ್ರಿ ಸರ್ಕಲ್ ವರೆಗೆ ಬಂದಿದ್ದು ಬಳಿಕ ಕಾಣೆಯಾಗಿದ್ದಾರೆ.5.4 ಅಡಿ ಎತ್ತರದ ಅವರು ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕಾಣೆಯಾಗುವಾಗ ನೇರಳೆ ಬಣ್ಣದ ಸ್ಲೀವ್‌ಲೆಸ್ ಟಾಪ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಕರಿಮಣಿ ಸರ ಹಾಗೂ 2 ಚಿನ್ನದ ಉಂಗುರ ಧರಿಸಿದ್ದರು. ಕನ್ನಡ ಭಾಷೆ ಅರಿತಿದ್ದಾರೆ. ಅವರ ಪತಿ ನೀಡಿದ ದೂರಿನಂತೆ ಇಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *