Breaking News

ಕನಕಪುರ: ರೆಸಾರ್ಟ್ ಕೊಠಡಿಯ ಕಿಟಕಿ ಗಾಜು ಒಡೆದು ಗ್ರಾಹಕರ ಲ್ಯಾಪ್ ಟಾಪ್ ಕಳ್ಳತನ

ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಶುಕ್ರವಾರ ರಾತ್ರಿ ರೂಮಿನ ಕಿಟಕಿಯ ಗಾಜು ಒಡೆದ ಕಳ್ಳರು ಗ್ರಾಹಕರ ಲ್ಯಾಪ್‌ಟಾಪ್‌ ಕಳ್ಳತನ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿ ಅನನ್ಯ ಎಂಬುವರ ಲ್ಯಾಪ್‌ಟಾಪ್‌ ಕಳ್ಳತನವಾಗಿದೆ. ಅದರ ಮೌಲ್ಯ ₹50 ಸಾವಿರ ಎಂದು ಅಂದಾಜಿಸಲಾಗಿದೆ.ಬೆಂಗಳೂರಿನ ಬಾಸ್ ಆಟೋಮೆಟಿಕ್ ಎಲೆಕ್ಟ್ರಾನಿಕ್ ಕಂಪನಿಯ 15 ಉದ್ಯೋಗಿಗಳು ಶುಕ್ರವಾರ ರಾತ್ರಿ ಕನಕಪುರದ ಹೊರ ವಲಯದ ರೆಸಾರ್ಟ್‌ಗೆ ಬಂದು ತಂಗಿದ್ದರು. ರಾತ್ರಿ ಕಿಟಕಿಯ ಗಾಜು ಒಡೆದು ಲ್ಯಾಪ್‌ಟಾಪ್‌ ಕಳ್ಳತನ ಮಾಡಲಾಗಿದೆ.ಲ್ಯಾಪ್‌ ಟಾಪ್ ಕಳೆದುಕೊಂಡ ಅನನ್ಯ ಅವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *