ಮಂಗಳೂರು: ನಗರದ ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ ಅಂದಾಜು 2 ವರ್ಷದ ಗಂಡು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ನಗರದ ಬೋಂದೆಲ್ ಕೃಷ್ಣ ನಗರ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಿಸಲಾಗಿದೆ.ಈ ಮಗುವಿನ ವಾರಸುದಾರರು ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಪಡೀಲ್ ಪ್ರಜಾಸೌಧ ಕಟ್ಟಡದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ (ದೂ.ಸಂ: 0824-2440004) ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

