ಮಣಿಪಾಲ: ಇಲ್ಲಿನ ಮಂಚಿಯ ಸಾರ್ವಜನಿಕ ಹಾಡಿಯಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀರ್ ಮತ್ತು ಫಾರೂಕ್ ಅಹಮ್ಮದ್ ಬಂಧಿತರು.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಸ್ಥಳದಿಂದ ಅಂದಾಜು 6,500 ರೂ. ಮೌಲ್ಯದ 4 ಕೋಳಿಗಳು, 15 ವಾಹನಗಳು ಹಾಗೂ ಪಣವಾಗಿ ಇಟ್ಟ 22,100 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

