Breaking News

ಬೋಳ ಗ್ರಾಮದಲ್ಲಿ ಕಳ್ಳರ ಕೈಚಳಕ: ಇನ್ವರ್ಟರ್ ಬ್ಯಾಟರಿ ಕಳವು

ಕಾರ್ಕಳ: ಬೋಳ ಗ್ರಾಮದ ಬೋಳಕೋಡಿ ಕುದುರೆಬೆಟ್ಟು ಎಂಬಲ್ಲಿನ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಮನೆಯ ಹಿಂಬಾಗಿಲು ಒಡೆದು ಪ್ರವೇಶಿಸಿ ಇನ್ವರ್ಟರ್ ಬ್ಯಾಟರಿ ಮತ್ತು ಸ್ಟೀಲ್ ಟ್ಯಾಪ್ ಕಳವು ಮಾಡಿದ್ದಾರೆ. ಕಳವಾದ ಸೊತ್ತಿನ ಅಂದಾಜು 12,000 ರೂ. ಎಂದು ಅಂದಾಜಿಸಲಾಗಿದೆ.ಸೆಲಿನ್ ಡಿಸೋಜ ಈ ಮನೆಯಲ್ಲಿ ವಾಸವಾಗಿದ್ದು, ಅನಾರೋಗ್ಯದ ಕಾರಣ ನ.30ರಂದು ಮಂಗಳೂರಿನ ಪುತ್ರಿ ಮನೆಗೆ ತೆರಳಿದ್ದರು. ಡಿ.7ರಂದು ಮನೆಗೆ ಆಗಮಿಸಿ ಪರಿಶೀಲಿಸಿದಾಗ ಮನೆಯ ಹಿಂಬಾಗಿಲು ಒಡೆದಿರುವುದು ಕಂಡುಬಂದಿದೆ. ಅಡುಗೆ ಕೋಣೆಯಲ್ಲಿದ್ದ ನೀರಿನ ಸ್ಟೀಲ್ ಟ್ಯಾಪ್ ಹಾಗೂ ಹಾಲ್‌ನಲ್ಲಿ ಇರಿಸಲಾಗಿದ್ದ ಇನ್ವರ್ಟರ್ ಬ್ಯಾಟರಿ ಕಳವಾಗಿರುವುದು ದೃಢಪಟ್ಟಿದೆ.ಮನೆಯ ಪರಿಸರದಲ್ಲಿ ವ್ಯಕ್ತಿಯೊಬ್ಬ ಬಿಳಿ ಬಣ್ಣದ ದ್ವಿಚಕ್ರ ವಾಹನದಲ್ಲಿ ಬಂದು ಓಡಾಡಿರುವುದನ್ನು ನೆರೆಹೊರೆಯವರು ಗಮನಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *