Breaking News

ಭಾರತ-ದಕ್ಷಿಣ ಆಫ್ರಿಕಾ ಟಿ20 ಟಿಕೆಟ್‌ ಅಕ್ರಮ ಮಾರಾಟ: ನಾಲ್ವರ ಸೆರೆ

ಭುವನೇಶ್ವರ: ಒಡಿಶಾದ ಕಟಕ್‌ನ ಬಾರಬತಿ ಮೈದಾನದಲ್ಲಿ ಮಂಗಳವಾರ ನಡೆಯಲಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟಿ20 ಕ್ರಿಕೆಟ್‌ ಪಂದ್ಯದ ಟಿಕೆಟ್‌ಗಳನ್ನು ಅಕ್ರಮವಾಗಿ (ಬ್ಲಾಕ್) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಿಡಾನಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚು ದರದಲ್ಲಿ ಮಾರಾಟವಾಗುತ್ತಿದ್ದ 12 ಟಿಕೆಟ್‌ಗಳನ್ನು, ದರ್ಗಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ಘಟನೆಗೆ ಸಂಬಂಧಿಸಿದಂತೆ 2 ಪೊಲೀಸ್ ಠಾಣೆಗಳಲ್ಲಿ 4 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *