ತೀವ್ರ ಸಾಲದ ಸುಳಿಗೆ ಸಿಲುಕಿದ್ದ ಒಂದೇ ಕುಟುಂಬದ ಮೂವರು ಸದಸ್ಯರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ಬೆಂಗಳೂರಿನ ಕೋರಮಂಗಲ ಸಮೀಪದ ತಾವರೇಕೆರೆ 2ನೇ ಕ್ರಾಸ್‌ನಲ್ಲಿ ಸೋಮವಾರ ವರದಿಯಾಗಿದೆ. ಅಜ್ಜಿ, ಮಗಳು ಮತ್ತು ಮೊಮ್ಮಗ ಹೀಗೆ ಮೂವರು ಏಕಕಾಲಕ್ಕೆ ಸಾವಿಗೆ ಶರಣಾಗಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.ಮೃತರನ್ನು ಮಾದಮ್ಮ (68), ಆಕೆಯ ಮಗಳು ಸುಧಾ (38), ಮತ್ತು ಮೊಮ್ಮಗ ಮೋನಿಷ್ (14) ಎಂದು ಗುರುತಿಸಲಾಗಿದೆ. ಬೆಳಗ್ಗೆ 9 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಮೊಮ್ಮಗನಿಗೆ ವಿಷ ಕುಡಿಸಿ, ತದನಂತರ ತಾಯಿ ಮತ್ತು ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

