Breaking News

ಲಾಠಿ ಚಾರ್ಜ್ ಪ್ರಕರಣ | ನ್ಯಾಯ ಸಿಗುವವರೆಗೆ ಹೋರಾಟ ನಿರಂತರ: ಮೃತ್ಯುಂಜಯ ಸ್ವಾಮೀಜಿ

ಸರ್ಕಾರ ಎಷ್ಟೇ ಲಾಠಿ ಏಟು ಕೊಟ್ಟರೂ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಸರ್ಕಾರ ದ್ವೇಷದಿಂದ ಪಂಚಮಸಾಲಿ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದರೆ; ನಾವು ಶಾಂತಿಯಿಂದ ಹೋರಾಟ ಮುಂದುವರಿಸುತ್ತೇವೆ. ಬೆಳಗಾವಿಯ ಅದೇ ಸ್ಥಳದಿಂದ ಮತ್ತೊಮ್ಮೆ ಹೋರಾಟದ ಸಂಕಲ್ಪ ಮಾಡುತ್ತೇವೆ’ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.ಗದಗ ನಗರದ ಅಶೋಕ ಸಂಕಣ್ಣವರ ಮಿಲ್‍ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಂಚಮಸಾಲಿ ಹಿರಿಯರ ಘಟಕದ ಅಧ್ಯಕ್ಷರು ಅನಿಲಕುಮಾರ ಪಾಟೀಲ್, ಅಶೋಕ ಸಂಕಣ್ಣವರ, ಮೋಹನ ಮಾಳಶೆಟ್ಟಿ, ಎಸ್.ಎಸ್.ಹುರಕಡ್ಲಿ, ವಿರುಪಾಕ್ಷಪ್ಪ ಮಟ್ಟಿ, ಕುಬೇರಗೌಡ ಮಲ್ಲಫೂರ, ಡಾ. ಎಸ್.ವಿ.ಶಿವನಗೌಡ್ರ, ಯುವ ಘಟಕದ ಅಧ್ಯಕ್ಷರು ಅಯ್ಯಪ್ಪ ಅಂಗಡಿ, ವಸಂತ ಪಡಗದ, ಈರಣ್ಣ ಕೊಟಗಿ, ನಗರಸಭೆ ಸದಸ್ಯರಾದ ಮಹಾಂತೇಶ ನಲವಡಿ, ಪ್ರಕಾಶ್ ಅಂಗಡಿ, ಶಿವು ಹಿರೇಮನಿಪಾಟೀಲ, ಸಂಗಮೇಶ ಕವಳಿಕಾಯಿ, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಗೊಳಗೊಳಕಿ, ಸಿದ್ದಣ್ಣ ಜೀವನಗೌಡ್ರ, ಸಿದ್ದು ಪಾಟೀಲ ಇದ್ದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *