ನಗರದ ಬಿ.ಎಚ್ ರಸ್ತೆಯಲ್ಲಿ ಬೀದಿದೀಪ ಬಿದ್ದಿದ್ದರಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿವಿಪುರಂ ನಿವಾಸಿ ಸಿಖಂದರ್ ಖಾನ್ (45) ಸೋಮವಾರ ಮೃತಪಟ್ಟಿದ್ದಾರೆ.ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಂಬಂಧಿಕರು, ನಗರಸಭೆ ಕಾರ್ಯಾಲಯದ ಆವರಣದಲ್ಲಿ ಶವ ಇಟ್ಟು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.ವೃತ್ತ ನಿರೀಕ್ಷಕ ಅಂಜನ್ ಕುಮಾರ ಮಾತನಾಡಿ, ಈ ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

