Breaking News

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. ‘ಬಂಗಾರಿ’ ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?

ಬಮೂಲ್ ಅಧ್ಯಕ್ಷ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರಿನಲ್ಲಿ ಕೋಟ್ಯಂತರ ರು. ವಂಚನೆ ಪ್ರಕರಣ ಸಂಬಂಧ ಚಲನಚಿತ್ರ ನಟ ಧರ್ಮ ಅವರಿಗೆ ಧ್ವನಿ ಪರೀಕ್ಷೆಯ ಸಂಕಷ್ಟ ಎದುರಾಗಿದೆ.ವಂಚನೆ ಪ್ರಕರಣದಲ್ಲಿ ಚಿನ್ನದ ವ್ಯಾಪಾರಿ ವನಿತಾ ಜತೆ ಮಾಜಿ ಸಂಸದ ಸುರೇಶ್ ಎಂದು ಹೇಳಿಕೊಂಡು ಧರ್ಮ ಮಾತನಾಡಿದ್ದರು ಎಂಬ ಆರೋಪವಿದೆ. ಈ ಬಗ್ಗೆ ಬಹಿರಂಗವಾದ ಆಡಿಯೋದಲ್ಲಿ ಪುರುಷ ದನಿ ಇದೆ. ಹೀಗಾಗಿ ಆಡಿಯೋದಲ್ಲಿರುವ ದನಿ, ಧರ್ಮ ಅವರ ಧ್ವನಿ ಸಾಮ್ಯತೆ ಬಗ್ಗೆ ಪರೀಕ್ಷೆ ನಡೆಯಲಿದೆ. ಒಂದು ವೇಳೆ ಹೊಂದಾಣಿಕೆ ಪತ್ತೆಯಾದರೆ ಪ್ರಕರಣದಲ್ಲಿ ಪ್ರಬಲವಾದ ತಾಂತ್ರಿಕ ಸಾಕ್ಷ್ಯ ಸಿಗಲಿದೆ ಎನ್ನಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *